ಬೆಳ್ತಂಗಡಿ: ಬಸ್ ಪಲ್ಟಿ; 15ಕ್ಕೂ ಅಧಿಕ ಮಂದಿಗೆ ಗಾಯ
Update: 2021-04-03 23:38 IST
ಬೆಳ್ತಂಗಡಿ : ಮೈಸೂರಿನಿಂದ ಧರ್ಮಸ್ಥಳಕ್ಕೆ ಮದುವೆ ನಿಮಿತ್ತ ಹೋಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ಶನಿವಾರ ರಾತ್ರಿ ನಡೆದಿದೆ.
3 ಮಕ್ಕಳ ಸಹಿತ ಓರ್ವನಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬಸ್ಸಿನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರೆನ್ನಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಸ್ಪಂದಿಸಿ ರಕ್ಷಣಾ ಕಾರ್ಯ ನಡೆಸಿದರು. ಬಸ್ಸಿನಲ್ಲಿ ಸಿಲುಕಿದವರನ್ನು ಕೂಡಲೇ ಹೊರ ತಂದು ಗಾಯಾಳುಗಳನ್ನು ಉಜಿರೆ ಬೆಳ್ತಂಗಡಿಯ ಆಸ್ಪತ್ರೆಗಳಿಗೆ ದಾಖಲಿಸಲು ಸಹಕರಿಸಿದ್ದಾರೆ.
ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.