ಜಿಮ್‍ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶ: ಮಾರ್ಗಸೂಚಿ ಪರಿಷ್ಕರಿಸಿ ಆದೇಶ ಹೊರಡಿಸಿದ ಸರಕಾರ

Update: 2021-04-04 15:11 GMT

ಬೆಂಗಳೂರು, ಎ. 4: ಕೊರೋನ ಸೋಂಕಿನ ಎರಡನೆ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದ್ದು, ಜಿಮ್‍ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶ ಕಲ್ಪಿಸಲು ಅನುಮತಿ ನೀಡಲಾಗಿದೆ.

ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿನ ಎಲ್ಲ ಜಿಮ್‍ಗಳನ್ನು ಮುಚ್ಚಲು ಆದೇಶಿಸಲಾಗಿತ್ತು. ಆದರೆ, ಇದಕ್ಕೆ ಜಿಮ್ ಮಾಲಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಪರಿಷ್ಕರಿಸಲಾಗಿದೆ.

ಜಿಮ್‍ಗಳ ಒಟ್ಟು ಸಾಮರ್ಥ್ಯದಲ್ಲಿ ಶೇ.50ಕ್ಕಿಂತ ಹೆಚ್ಚು ಜನ ಒಂದೇ ಅವಧಿಯಲ್ಲಿ ಸೇರುವಂತಿಲ್ಲ. ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಮಾಡಬೇಕು. ಜಿಮ್ ಸಲಕರಣೆಗಳನ್ನು ಬಳಕೆ ಮಾಡಿದ ಬಂತರ ಶುಚಿಗೊಳಿಸಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News