ಯಾವುದೇ ಸಮಸ್ಯೆ ಇಲ್ಲದೆ ಐಪಿಎಲ್ ನಡೆಯಲಿದೆ: ರಾಜೀವ್ ಶುಕ್ಲಾ

Update: 2021-04-04 18:53 GMT

 ಹೊಸದಿಲ್ಲಿ:ಕೊರೋನ ವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದರೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂಬರುವ ಆವೃತ್ತಿಯು ಯಾವುದೇ ಸಮಸ್ಯೆ ಇಲ್ಲದೆ ನಡೆಯಲಿದೆ ಎಂದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊರೋನ ವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದಕ್ಕಾಗಿಯೇ ಬಿಸಿಸಿಐ ಈಗಾಗಲೇ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ. ಇದರಿಂದಾಗಿ ಕೇವಲ ಆರು ಸ್ಥಳಗಳನ್ನು ಮಾತ್ರ ಪಂದ್ಯಗಳನ್ನು ನಡೆಸಲು ಆಯ್ಕೆ ಮಾಡಲಾಗಿದೆ. ಭವಿಷ್ಯದಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣಗಳು ತೀವ್ರಗೊಂಡರೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಶುಕ್ಲಾ ತಿಳಿಸಿದರು.ಮಹಾರಾಷ್ಟ್ರದಲ್ಲಿ ಕೊರೋನ ವೈರಸ್ ಪ್ರಕರಣಗಳ ಹೆಚ್ಚಳ ಉಂಟಾಗಿದೆ. ಆದರೆ ಎಪ್ರಿಲ್ 9ರಿಂದ ಪ್ರಾರಂಭವಾಗಲಿರುವ ಮುಂಬರುವ ಐಪಿಎಲ್‌ನ ಮುಂಬೈ ಪಂದ್ಯಗಳನ್ನು ಇತರ ಕೆಲವು ಸ್ಥಳಗಳಿಗೆ ಸ್ಥಳಾಂತರಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಶುಕ್ಲಾ ಹೇಳಿದರು.

ಎಪ್ರಿಲ್ 10ರಿಂದ 25ರವರೆಗೆ ಈ ಋತುವಿನಲ್ಲಿ ವಾಂಖೆಡೆ ಕ್ರೀಡಾಂಗಣ 10 ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಸಜ್ಜ್ಜಾಗಿದೆ. ಮುಂಬೈ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಪಂದ್ಯ ಎಪ್ರಿಲ್ 10ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಿಗದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News