×
Ad

2 ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಚಾಮರಾಜನಗರ ಜಿಲ್ಲಾಧಿಕಾರಿಗೆ ಸೋಂಕು ದೃಢ

Update: 2021-04-05 14:32 IST

ಚಾಮರಾಜನಗರ, ಎ.5: ಎರಡು ಡೋಸ್ ಕೋವಿಡ್-19 ನಿಯಂತ್ರಣ ಲಸಿಕೆ ಪಡೆದಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ಆರ್.ರವಿಯವರಿಗೆ ಕೊರೋನ ಸೋಂಕು ತಗಲಿರುವುದು ದೃಢವಾಗಿದೆ.

ಜಿಲ್ಲಾಧಿಕಾರಿಗೆ ಎರಡು ದಿನಗಳ ಹಿಂದೆ ಶೀತ ನೆಗಡಿ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಶನಿವಾರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿತ್ತು. ರವಿವಾರ ಫಲಿತಾಂಶ ಬಂದಿದ್ದು, ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಹೋಂ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಫೆಬ್ರವರಿ 8ರಂದು ಮೊದಲ ಡೋಸ್ ಹಾಗೂ ಮಾರ್ಚ್ 8ರಂದು ಎರಡನೇ ಡೋಸ್ ಲಸಿಕೆ ಪಡೆದಿದ್ದರು. ಎರಡನೇ ಡೋಸ್ ಪಡೆದು 27 ದಿನಗಳಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News