ಈ ವರ್ಷದ ಐಪಿಎಲ್ ನಡೆಯುವ ಕುರಿತಾಗಿ ಬಿಸಿಸಿಐ ಅಧ್ಯಕ್ಷ ಗಂಗುಲಿ ಪ್ರತಿಕ್ರಿಯಿಸಿದ್ದು ಹೀಗೆ

Update: 2021-04-05 11:38 GMT

ಹೊಸದಿಲ್ಲಿ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಎಲ್ಲವೂ ನಿಗದಿಯಂತೆ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ರವಿವಾರ ದೃಢಪಡಿಸಿದ್ದಾರೆ.

ಮಹಾರಾಷ್ಟ್ರ ಸರಕಾರವು ಕೋವಿಡ್-19 ಹರಡುವುದನ್ನು ತಡೆಗಟ್ಟಲು ವಾರಾಂತ್ಯದಲ್ಲಿ ಲಾಕ್ ಡೌನ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಗಂಗುಲಿ ಹೇಳಿಕೆ ನೀಡಿದರು.

ಎಲ್ಲವೂ ವೇಳಾಪಟ್ಟಿಯಂತೆಯೇ ನಡೆಯಲಿದೆ ಎಂದು ಎಎನ್ ಐಗೆ ಗಂಗುಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ವಾರಾಂತ್ಯದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ನಡೆಸಲು ಸರಕಾರವು ನಿರ್ಧರಿಸಿದ್ದು, ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 7 ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಬಸ್ ಗಳು, ರೈಲುಗಳು ಹಾಗೂ ಟ್ಯಾಕ್ಸಿಗಳ ಸಹಿತ ಅಗತ್ಯ ಸೇವೆಗಳು ಹಾಗೂ ಸಾರಿಗೆಗಳು ಇರುತ್ತವೆ ಎಂದು ರಾಜ್ಯ ಸಂಪುಟ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂ ಈ ವರ್ಷದ ಐಪಿಎಲ್ ನಲ್ಲಿ ಎಪ್ರಿಲ್ 10ರಿಂದ 25 ರ ತನಕ 10 ಐಪಿಎಲ್ ಪಂದ್ಯಗಳ ಆತಿಥ್ಯವಹಿಸಲಿದೆ. ಮೊದಲ ಪಂದ್ಯವು ಡೆಲ್ಲಿಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಎಪ್ರಿಲ್ 10ರಂದು ನಡೆಯಲಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News