ಐಟಿ ಇಲಾಖೆಯ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್

Update: 2021-04-05 12:18 GMT

ಬೆಂಗಳೂರು, ಎ.5: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚೀಟಿ ಹರಿದು ಸಾಕ್ಷ್ಯ ನಾಶ ಮಾಡಿದ ಆರೋಪ ಸಂಬಂಧ ಐಟಿ ಇಲಾಖೆ ನೀಡಿದ್ದ ದೂರಿನ ಪ್ರಕರಣದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಡಿಕೆಶಿ ವಿರುದ್ಧ ಐಟಿ ಇಲಾಖೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು.

ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯವು ಪ್ರಕರಣವನ್ನು ಕೈಬಿಟ್ಟಿರುವುದನ್ನು ಪರಿಗಣಿಸಿದ ನ್ಯಾಯಪೀಠವು, ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದ ಮೇಲೆ ಐಟಿ ಇಲಾಖೆ ಈಗಲ್ ಟನ್ ರೆಸಾರ್ಟ್ ಮೇಲೆ ಐಟಿ ಇಲಾಖೆ ಈಗಲ್ ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ ವೇಳೆ ಡಿಕೆಶಿ ಅವರು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಸಂಬಂಧ ಐಟಿ ಇಲಾಖೆ ದೂರು ದಾಖಲಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News