×
Ad

ಸಿಬಿಐ ತನಿಖೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಅನಿಲ್ ದೇಶ್ ಮುಖ್ ನಿರ್ಧಾರ

Update: 2021-04-05 19:17 IST

ಹೊಸದಿಲ್ಲಿ: ಇಂದು ಮಹಾರಾಷ್ಟ್ರ ರಾಜ್ಯ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಅನಿಲ್ ದೇಶ್ ಮುಖ್ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತನ್ನ ವಿರುದ್ಧ ಸಿಬಿಐ ತನಿಖೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ಧರಿಸಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್ ಅವರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಅನಿಲ್  ದೇಶ್ ಮುಖ್ ವಿರುದ್ಧ ಪ್ರಾಥಮಿಕ ಸಿಬಿಐ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ. ಪ್ರಾಥಮಿಕ ವರದಿ ಸಲ್ಲಿಕೆಗೆ ಸಿಬಿಐಗೆ 15 ದಿನಗಳ ಕಾಲಾವಕಾಶ ಹೈಕೋರ್ಟ್ ನೀಡಿತ್ತು. ಹೈಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ದೇಶ್ ಮುಖ್ ನೈತಿಕ ಹೊಣೆ ಹೊತ್ತು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ತಿಂಗಳು ಮುಂಬೈ ಪೊಲೀಸ್ ಮುಖ್ಯಸ್ಥ ಹುದ್ದೆಯನ್ನು ಕಳೆದುಕೊಂಡಿದ್ದ ಸಿಂಗ್  ಸುಪ್ರೀಂ ಕೋರ್ಟ್ ಆದೇಶದ ನಂತರ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ದೇಶ್ ಮುಖ್ ವಿರುದ್ಧ ದೂರು ನೀಡಿದ್ದರಿಂದ ತನ್ನನ್ನು ಆಯುಕ್ತ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಸಿಂಗ್ ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News