ಉಡುಪಿ: ಡಾ.ಬಾಬು ಜಗಜೀವನರಾಂ ಜನ್ಮದಿನಾಚರಣೆ
ಉಡುಪಿ, ಎ.5: ಡಾ.ಬಾಬು ಜಗಜೀವನರಾಂ ಅವರು ಸ್ವಾತಂತ್ರ ಹೋರಾಟಗಾರರಷ್ಟೇ ಅಲ್ಲದೇ ಸಮಾಜ ಸೇವಕರೂ ಆಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಜೀವನ ಚರಿತ್ರೆಯನ್ನು ತಿಳಿದುಕೊಂಡು ಅವರ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಪಂ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ ಮತ್ತು ಪ.ಪಂಗಡಗಳ ಸಂಘಟನೆ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ನಡೆದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 114ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನರಾಂರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಡಾ.ಬಾಬು ಜಗಜೀವನರಾಂ ಜೀವನಚರಿತ್ರೆ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ್‌ಚಂದ್ರ, ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡ ಸಂಘಟನೆಗಳ ಪದಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.