ಉಡುಪಿ: ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಅಭಿನಂದನೆ
Update: 2021-04-05 21:34 IST
ಉಡುಪಿ, ಎ.5: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕಾರ್ಯಕ್ರಮ ದಡಿ ಗ್ರಾಪಂಗಳ ವ್ಯಾಪ್ತಿಯಲ್ಲಿ ಸ್ವಸಹಾಯ ಗುಂಪುಗಳು ಹಾಗೂ ಒಕ್ಕೂಟ ರಚನೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಮುಖ್ಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳನ್ನು ಸೋಮವಾರ ಉಡುಪಿ ಜಿಪಂನ ಕೊನೆಯ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ದಿನಕರ ಬಾಬು ಪ್ರಮಾಣ ಪತ್ರ ಹಾಗೂ ಹಣ್ಣಿನ ಗಿಡಗಳನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಕೌಡೂರು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಸಿಇಓ ಡಾ. ನವೀನ್ ವೈ ಭಟ್, ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.