ಸಿಎಂ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯರಿಗೆ ಹುಚ್ಚು ಹಿಡಿದಿದೆ ಎಂದ ಸಚಿವ ಈಶ್ವರಪ್ಪ

Update: 2021-04-05 16:50 GMT
File Photo

ಶಿವಮೊಗ್ಗ, ಎ.5: ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ ನಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ತಿರುಗೇಟು ನೀಡಿದರು.

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ. ಕರ್ನಾಟಕದಲ್ಲಿ ಇಷ್ಟೊಂದು ಅಭಿವೃದ್ಧಿ ಆಗುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟು ಹೋಗಿದೆ ಎಂದು ಆರೋಪಿಸಿದರು.

ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ ಸಂದರ್ಭ, ತಮ್ಮ ಮಾತು ಕೇಳಲಿಲ್ಲ ಎಂದು ನಾಲ್ಕು ದಿನ ಹೋಗಿ ರೆಸಾರ್ಟ್ ನಲ್ಲಿ ಕೂತಿದ್ದರು. ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ ಎಂದು ರಮೇಶ್ ಕುಮಾರ್ ಅವರೂ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಸ್ಥಿತಿ ಹೇಗಿದೆ ಅಂದರೆ ತೊಟ್ಟಿಯಲ್ಲಿರುವ ಕಸದಂತಾಗಿದೆ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳು ಮಾತು ಕೇಳುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾಳೆಯೋ, ನಾಡಿದ್ದೋ ಬೆಂಗಳೂರಿಗೆ ಹೋಗುತ್ತೇನೆ. ಸ್ವಾತಂತ್ರ್ಯ ನಂತರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಏನೇನು ಆಗಿರಲಿಲ್ಲ, ಈಗ ಏನೇನು ಆಗಿದೆ ಅನ್ನುವುದರ ಪಟ್ಟಿ ಕೊಡುತ್ತೇನೆ. ನಾವು, ನಮ್ಮ ಅಧಿಕಾರಿಗಳು ಏನೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News