ಎ.7-8: ಸಚಿವ ಈಶ್ವರಪ್ಪ ಪ್ರವಾಸ
Update: 2021-04-05 22:26 IST
ಮಂಗಳೂರು, ಎ.5:ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪಎ.7 ಮತ್ತು 8ರಂದು ದ.ಕ. ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಎ.7ರಂದು ಸಂಜೆ 4:10ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಂಜೆ 5 ಗಂಟೆಗೆ ಜಿಪಂ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯೋಜನೆ ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎ.8ರಂದು ಬೆಳಗ್ಗೆ 10 ಗಂಟೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4:40ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.