6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಜಾರಿ ಮಾಡಲು ಎಸ್‍ಡಿಪಿಐ ಆಗ್ರಹ

Update: 2021-04-05 17:19 GMT

ಬೆಂಗಳೂರು, ಎ.5: ಸಾರಿಗೆ ನೌಕರರು ತಮ್ಮ ಹಲವಾರು ಬೇಡಿಕೆಗಳನ್ನು ಮುಂದಿಟ್ಟು 3 ತಿಂಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದರಲ್ಲಿ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೂ ವೇತನ ನೀಡಬೇಕು ಹಾಗೂ ಸರಕಾರಿ ನೌಕರರಿಗಿರುವ ಸಾಮಾನ ಸವಲತ್ತುಗಳನ್ನು ನೀಡಬೇಕು ಎಂಬ ಬೇಡಿಕೆ ಪ್ರಮುಖವಾಗಿತ್ತು ಎಂದು ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.

ಸರಕಾರ ಈವರೆಗೂ ಸಾರಿಗೆ ನೌಕರರ ಈ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಲ್ಲ. ಇದರ ವಿರುದ್ಧ ಸಾರಿಗೆ ನೌಕರರು ಎ.7ರಿಂದ ಮತ್ತೊಮ್ಮೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಈ ಮುಷ್ಕರದಿಂದ ಜನಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ. ಆದುದರಿಂದ, ಸರಕಾರ ತಕ್ಷಣ ಸಾರಿಗೆ ನೌಕರರಿಗೆ ಈ ಹಿಂದೆ ಲಿಖಿತವಾಗಿ ಭರವಸೆ ನೀಡಿದ್ದ ರೀತಿಯಲ್ಲಿ ಅವರ ಎಲ್ಲ ನ್ಯಾಯಯುತ ಬೇಡಿಕೆಗಳನ್ನು ಈಡೇರಿಕೆಗೆ ಕ್ರಮವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News