ಮಂಗಳೂರು : ಎ. 8ರಂದು ಮನ್ನಾನ್ ಫೌಂಡೇಶನ್ ನಿಂದ 6 ಜೋಡಿಗಳ ಸಾಮೂಹಿಕ ವಿವಾಹ

Update: 2021-04-06 06:10 GMT

ಮಂಗಳೂರು : ದ.ಕ. ಜಿಲ್ಲೆಯ ಅನಿವಾಸಿ ಭಾರತೀಯ ಯುವಕರ ತಂಡವು ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸ್ಥಾಪಿಸಿರುವ 'ಮನ್ನಾನ್ ಫೌಂಡೇಶನ್' ವತಿಯಿಂದ ಎರಡನೆ ವರ್ಷದ 6 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವು ಎ.8ರಂದು ನಡೆಯಲಿದೆ.

ಮಂಗಳೂರಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಸರಳ ವಿವಾಹ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ಫೌಂಡೇಶನ್ ಅಧ್ಯಕ್ಷ ಆರಿಫ್ ಬಿ.ಎಂ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಅವರು ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ಆಹ್ವಾನಿತರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ರಾಜ್ಯ ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಿ ಕಾರ್ಯಕ್ರಮ ನಡೆಯಲಿದೆ. ಕಳೆದ ವರ್ಷ ಬೆಂಗ್ರೆಯಲ್ಲಿ ನಾಲ್ಕು ಜೋಡಿಗಳ ಸರಳ ವಿವಾಹ ನಡೆಸಲಾಗಿತ್ತು ಎಂದು ಅವರು ತಿಳಿಸಿದರು.

2020ರಲ್ಲಿ ಸ್ಥಾಪನೆಗೊಂಡ ಮನ್ನಾನ್ ಫೌಂಡೇಶನ್ ಕೊರೋನ ಲಾಕ್ ಡೌನ್ ಸಮಯದಲ್ಲಿ ಊರಿಗೆ ಬರಲಾಗದೆ ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿದ್ದವರನ್ನು ನಾಲ್ಕು ಚಾರ್ಟರ್ಡ್ ವಿಮಾನಗಳ ವ್ಯವಸ್ಥೆ ಮಾಡಿ ಊರಿಗೆ ಕರೆಸಿದೆ ಎಂದರು.

ಗೋಷ್ಠಿಯಲ್ಲಿ ಫೌಂಡೇಶನ್ ಉಪಾಧ್ಯಕ್ಷ ಅಬ್ದುಲ್ ರಹೀಮ್, ಟ್ರಸ್ಟಿ ನೂರುದ್ದೀನ್ ಕಂದಕ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News