ಎರಡನೇ ಬಾರಿಗೆ ಕೋವಿಡ್ ಲಸಿಕೆ ಪಡೆದ ಶಾಸಕ ಅಪ್ಪಚ್ಚು ರಂಜನ್
Update: 2021-04-06 17:02 IST
ಮಡಿಕೇರಿ, ಎ.6: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಅವರ ಪತ್ನಿ ಶೈಲಾ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಎರಡನೇ ಬಾರಿಗೆ ಕೋವಿಡ್ ಲಸಿಕೆ ಪಡೆದರು.
ನಂತರ ಮಾತನಾಡಿದ ಅವರು, ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ಎಲ್ಲಾರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಇದರಿಂದ ಯಾವುದೇ ತೊಂದರೆಯಾಗಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕ ಪಡದೆ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಮನವಿ ಮಾಡಿದರು.