ರಫೇಲ್ ಖರೀದಿಯಲ್ಲಿ ಅವ್ಯವಹಾರ ಆರೋಪ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

Update: 2021-04-06 12:20 GMT

ಹೊಸದಿಲ್ಲಿ:ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಕೇಂದ್ರ ಸರಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

ವ್ಯಕ್ತಿ ತಾನು ಮಾಡಿದ ಕರ್ಮಕ್ಕೆ ಪ್ರತಿಫಲವನ್ನು ಅನುಭವಿಸಲೇಬೇಕು. ಇದರಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯ ಇಲ್ಲ ಎಂದು ಟ್ವೀಟ್ ಮೂಲಕ ಕುಟುಕಿದ್ದಾರೆ.

ರಫೇಲ್ ಯುದ್ದ ವಿಮಾನ ತಯಾರಕ ಕಂಪೆನಿಯು ಮಧ್ಯವರ್ತಿಯೊಬ್ಬರಿಗೆ 9.51 ಕೋ.ರೂ. ನೀಡಿದೆ ಎಂಬುದಾಗಿ ಫ್ರಾನ್ಸ್ ನ ಮಾಧ್ಯಮವೊಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಕೇಂದ್ರದ ವಿರುದ್ಧ ಚಾಟಿ ಬೀಸಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ಆಧಾರ ರಹಿತ ಎಂದು ಹೇಳಿದೆ.

ರಾಹುಲ್ ಗಾಂಧಿ ಅವರು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸುತ್ತಲೇ ಇದ್ದಾರೆ. ಈಗ ಫ್ರಾನ್ಸ್ ನ ಮಾಧ್ಯಮದಲ್ಲಿ ಈ ಕುರಿತು ವರದಿಯಾಗಿದ್ದು, ಇದು ರಾಹುಲ್ ಗಾಂಧಿ ಅವರ ಆರೋಪವನ್ನು ಸಮರ್ಥಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ರಫೇಲ್ ಒಪ್ಪಂದ ವಿಚಾರವನ್ನು ದೊಡ್ಡ ಸುದ್ದಿಯನ್ನಾಗಿಸಿತ್ತು. ಆದರೆ ಚುನಾವಣೆಯಲ್ಲಿ ಸೋಲನುಭವಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News