ಎ.7ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Update: 2021-04-06 13:28 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.6: ರಾಜ್ಯದಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರ ಬೆನ್ನಲ್ಲೇ ಎ.7ರಿಂದ 10ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟವನ್ನು ತಲುಪಿದೆ. ಇದರಿಂದಾಗಿ ಜನತೆ ಬಿಸಿಲಿನಿಂದ ಬಳಲಿದ್ದು, ಮಳೆ ಬಂದರೆ ಉತ್ತಮ ಎನ್ನುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎ.7 ಹಾಗೂ ಎ.8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ ಹಾಗೂ ಎ.9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ಧಾರವಾಡ, ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ ತಿಂಗಳು ಪೂರ್ತಿ ಭಾರತದಲ್ಲಿ ತಾಪಮಾನ ಏರುಗತಿಯಲ್ಲೇ ಸಾಗಿದ್ದು, ಕಳೆದ 121 ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ಮೂರನೇ ಬಾರಿಗೆ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅಂತೆಯೇ ಕಳೆದ 11 ವರ್ಷಗಳಲ್ಲಿ ಇದು ತಿಂಗಳ ಗರಿಷ್ಠ ತಾಪಮಾನವಾಗಿದ್ದು, ಈ ಬಾರಿಯ ಮಾರ್ಚ್ ನಲ್ಲಿ ದೇಶದಲ್ಲಿ ಸರಾಸರಿ 32.65 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News