ಕಠಿಣ ಕ್ರಮಕ್ಕೆ ಅವಕಾಶ ಕೊಡಬೇಡಿ, ಮುಷ್ಕರ ಕೈಬಿಡಿ: ಸಾರಿಗೆ ನೌಕರರಿಗೆ ಸಿಎಂ ಯಡಿಯೂರಪ್ಪ ಮನವಿ

Update: 2021-04-06 13:41 GMT

ಹುಬ್ಬಳ್ಳಿ, ಎ.6: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎ.7ರಿಂದ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಸರಕಾರದೊಂದಿಗೆ ಸಹಕರಿಸಬೇಕು. ಕಠಿಣ ಕ್ರಮಕ್ಕೆ ಅವಕಾಶ ಕೊಡಬಾರದು ಎಂದು ತಿಳಿಸಿದ್ದಾರೆ.

ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ದಯವಿಟ್ಟು ಮುಷ್ಕರ ಕೈಬಿಟ್ಟು ಸರಕಾರದೊಂದಿಗೆ ಸಹಕರಿಸಬೇಕು. 9 ಬೇಡಿಕೆಗಳ ಪೈಕಿ ಈಗಾಗಲೇ ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ. ಹಾಗಾಗಿ ಕಠಿಣ ಕ್ರಮಕ್ಕೆ ಅವಕಾಶ ಕೊಡಬಾರದು ಎಂದು ವಿನಂತಿಸಿದರು.

ನೌಕರರು ಮುಷ್ಕರ ಮುಂದುವರಿಸಿದರೆ ಖಾಸಗಿ ವಾಹನಗಳು ಮತ್ತು ರೈಲುಗಳ ಸಂಚಾರ ಹೆಚ್ಚಿಸಿ, ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News