ಯಾಂತ್ರೀಕೃತ ದೋಣಿಗಳ ನಿರ್ಮಾಣಕ್ಕೆ ಸಾಧ್ಯತಾ ಪತ್ರ ಪಡೆಯುವ ಬಗ್ಗೆ
Update: 2021-04-06 20:28 IST
ಉಡುಪಿ, ಎ.6: 2016 ನ.21ರ ಸರಕಾರಿ ಆದೇಶದಂತೆ ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ದೋಣಿಗಳ ನಿರ್ಮಾಣಕ್ಕೆ ಸಾಧ್ಯತಾ ಪತ್ರ ಪಡೆಯಲು ಮೀನುಗಾರಿಕಾ ಇಲಾಖೆಗೆ ಅರ್ಜಿ ಸಲ್ಲಿಸಿ, ಈವರೆಗೆ ಸಾಧ್ಯತಾ ಪ್ರಮಾಣ ಪತ್ರ ಪಡೆಯದ ಅರ್ಜಿದಾರರಿಗೆ ಸಾಧ್ಯತಾ ಪತ್ರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಆದೇಶದಂತೆ ಅರ್ಜಿದಾರರು ಎ.30ರೊಳಗೆ ಹೊಸ ದೋಣಿಗಳ ನಿರ್ಮಾಣಕ್ಕೆ ಸಾಧ್ಯತಾ ಪತ್ರ ಪಡೆದುಕೊಳ್ಳಬೇಕಾಗಿದೆ. ಆದ್ದರಿಂದ ದಿನಾಂಕ: 2016 ನ.21ರೊಳಗೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ನಿಯಮಾನುಸಾರ ಸಂಬಂಧಿತ ದಾಖಲೆಗಳೊಂದಿಗೆ ಹಾಗೂ 10,000 ರೂ.ಗಳ ಡಿಡಿಯೊಂದಿಗೆ ಸಂಬಂಧ ಪಟ್ಟ ಇಲಾಖಾ ಕಚೇರಿಯನ್ನು ಕೂಡಲೇ ಸಂಪರ್ಕಿಸುವಂತೆ ಉಡುಪಿ ಮೀನುಗಾರಿಕಾ ಇಲಾಖೆಯ ಹಿರಿಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.