ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್‌ಪಾಸ್ ವಿತರಣೆ

Update: 2021-04-06 15:18 GMT

ಮಂಗಳೂರು, ಎ.6: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿರುವ ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿನಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅನುಕೂಲವಾಗುವಂತೆ ಉಚಿತ ಎಂಡೋಸಲ್ಫಾನ್ ಬಸ್‌ಪಾಸ್‌ಗಳನ್ನು ವಿತರಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಎ.26ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬಂಟ್ವಾಳ ತಾಲೂಕಿನ ವಿಟ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಎ.27ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಡೋಸಂತ್ರಸ್ಥರ ಪಾಲನಾ ಕೇಂದ್ರ, ಎ.28ರಂದು ಬೆಳಗ್ಗೆ 10ರಿಂದ ಸಂಜೆ 4ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಎ. 29ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಪುತ್ತೂರು ತಾಲೂಕಿನ ಕೊಲ ಗ್ರಾಪಂ ಕಚೇರಿಯಲ್ಲಿ, ಎ.30ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಸುಳ್ಯ ತಾಲೂಕಿನ ಬೆಳ್ಳಾರೆ ಕರಾರಸಾ ನಿಗಮದ ಸಂಚಾರ ನಿಯಂತ್ರಣ ಕೇಂದ್ರದಲ್ಲಿ ಬಸ್‌ಪಾಸ್‌ಗಳನ್ನು ವಿತರಿಸಲಾಗುವುದು. ಎಂಡೋಸಲ್ಫಾನ್ ಸಂತ್ರಸ್ಥರು/ಕುಟುಂಬದವರು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್‌ಗಳನ್ನು ಪಡೆದುಕೊಳ್ಳಬಹುದು.

ಮಾಹಿತಿಗಾಗಿ ಕರಾರಸಾ ನಿಗಮ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ (ದೂ. ಸಂ: 08251-235421) ಹಾಗೂwww.dcptr@ksrtc.org ಯನ್ನು ಸಂಪರ್ಕಿಸಬಹುದು ಎಂದು ಕರಾರಸಾ ನಿಗಮ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News