ಗುರುಪುರ: ಶಿಶು ಪ್ರದರ್ಶನ ಕಾರ್ಯಕ್ರಮ

Update: 2021-04-06 17:02 GMT

ಗುರುಪುರ, ಎ.6: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ), ಪ್ರಾಥಮಿಕ ಆರೋಗ್ಯ ಕೇಂದ್ರ, ಗುರುಪುರ ಗ್ರಾಪಂ ಇದರ ಜಂಟಿ ಆಶ್ರಯದಲ್ಲಿ ಮಂಗಳವಾರ ಗುರುಪುರ ಗ್ರಾಪಂ ಸಭಾಭವನದಲ್ಲಿ ‘ಶಿಶು ಪ್ರದರ್ಶನ’ ಕಾರ್ಯಕ್ರಮ ಜರುಗಿತು.

ಶಿಶುವಿನ ತೂಕ, ಎತ್ತರ, ಕುಟುಂಬ ಯೋಜನೆ ಮಾನದಂಡದನ್ವಯ ಸ್ಪರ್ಧೆಯಲ್ಲಿ ಪಾಲ್ಗೊಂಡ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ಗುರುಪುರ ಗ್ರಾಪಂ ಅಧ್ಯಕ್ಷ ಯಶವಂತ ಶೆಟ್ಟಿ ಮಾತನಾಡಿ ಹೆಣ್ಣು ಮಗುವಿನ ಶಿಕ್ಷಣ, ಆರೋಗ್ಯ ಮತ್ತು ಪೌಷ್ಠಿಕ ಆಹಾರ ಪೂರೈಕೆ ನಿಟ್ಟಿನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ನಡೆಸಿ ಕೊಡುವ ಎಲ್ಲ ಸರಕಾರಿ ಪ್ರಾಯೋಜಿತ ಕಾರ್ಯಕ್ರಮಗಳಿಗೆ ಪಂಚಾಯತ್ ವತಿಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಪಂಚಾಯತ್ ವ್ಯಾಪ್ತಿಯ ಮೂಳೂರು ಮತ್ತು ಅಡ್ಡೂರು ಗ್ರಾಮದ ಹಲವಾರು ಮಹಿಳೆಯರು ತಮ್ಮ ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗ್ರಾಪಂ ಉಪಾಧ್ಯಕ್ಷೆ ದಿಲ್ಶಾದ್ ಅಶ್ರಫ್, ಸದಸ್ಯರಾದ ನಳಿನಿ ಶೆಟ್ಟಿ, ಶೋಭಾ ಎ, ಬಬಿತಾ, ಬುಶ್ರಾ ಅನ್ವರ್, ರೆಹನಾ, ಸಫರಾ ಹಾಗೂ ಯೋಜನೆಯ ಮೇಲ್ವಿಚಾರಕಿ ಮಾಲಿನಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News