ಸರಕಾರ-ಸಾರಿಗೆ ನೌಕರರ ಜಗಳದಲ್ಲಿ ಲಕ್ಷಾಂತರ ಪ್ರಯಾಣಿಕರಿಗೆ ಸಂಕಷ್ಟ: ಎಸ್.ಆರ್.ಪಾಟೀಲ್

Update: 2021-04-07 12:14 GMT

ಬೆಂಗಳೂರು, ಎ.7: ಆರನೆ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಆದರೆ, ಸರಕಾರ ಭರವಸೆಯನ್ನು ಈಡೇರಿಸದೇ ಚುನಾವಣಾ ನೀತಿ ಸಂಹಿತೆ ನೆಪ ಹೇಳುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಬುಧವಾರ ಟ್ವೀಟ್ ಮಾಡಿರುವ ಎಸ್.ಆರ್.ಪಾಟೀಲ್ ಅವರು, ಸರಕಾರ ಹಾಗೂ ಸಾರಿಗೆ ನೌಕರರ ಜಗಳದಲ್ಲಿ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ರಾಜ್ಯದಲ್ಲಿ ಸರಕಾರಿ ಬಸ್‍ಗಳನ್ನೆ ನೆಚ್ಚಿಕೊಂಡು ಲಕ್ಷಾಂತರ ಜನರು ಪ್ರಯಾಣ ಮಾಡುತ್ತಾರೆ. ಸರಕಾರ ಸಮಸ್ಯೆಯನ್ನು ಬಗೆಹರಿಸದಿದ್ದರೆ ಜನರು ಮತ್ತಷ್ಟು ತೊಂದರೆ ಅನುಭವಿಸಲಿದ್ದಾರೆ ಎಂದು ತಿಳಿಸಿದರು.

ಮುಷ್ಕರ ಪ್ರಾರಂಭವಾಗುವ ಮೊದಲೇ ಸರಕಾರ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಚಿಂತನೆ ಮಾಡಬೇಕು. ಆದರೆ, ಸರಕಾರ ಈ ಯಾವ ಕೆಲಸವನ್ನೂ ಮಾಡಲು ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News