ಉಡುಪಿ ಜಿಲ್ಲೆಯಲ್ಲಿ 89 ಮಂದಿಗೆ ಕೊರೋನ ಪಾಸಿಟಿವ್

Update: 2021-04-07 13:33 GMT

ಉಡುಪಿ, ಎ.7: ಬುದವಾರ ಜಿಲ್ಲೆಯಲ್ಲಿ ಹೊಸದಾಗಿ 89 ಮಂದಿಯಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ. ದಿನದಲ್ಲಿ 59 ಮಂದಿ ಸೋಂಕಿ ನಿಂದ ಗುಣಮುಖರಾಗಿದ್ದರೆ, ಕೋವಿಡ್‌ಗೆ ಸಕ್ರಿಯರಾಗಿರುವವರ ಸಂಖ್ಯೆ 428ಕ್ಕೇರಿದೆ. ಸೋಂಕು ಮತ್ತೆ ಇಡೀ ಜಿಲ್ಲೆಗೆ ಹಬ್ಬಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 89 ಮಂದಿಯಲ್ಲಿ 46 ಮಂದಿ ಪುರುಷರು ಹಾಗೂ 43 ಮಂದಿ ಮಹಿಳೆಯರು. ಇವರಲ್ಲಿ 40 ಮಂದಿ ಉಡುಪಿ ತಾಲೂಕಿನವರಾದರೆ, 38 ಮಂದಿ ಕುಂದಾಪುರ ತಾಲೂಕು ಹಾಗೂ 10 ಮಂದಿ ಕಾರ್ಕಳ ತಾಲೂಕಿನವರು. ಹೊರ ಜಿಲ್ಲೆಯಿಂದ ಬಂದ ಓರ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಡಾ.ಸೂಡ ತಿಳಿಸಿದರು.

ಮಂಗಳವಾರ 59 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 25,100ಕ್ಕೇರಿದೆ. ಮಂಗಳವಾರ ಜಿಲ್ಲೆಯ 2681 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 89 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 25,720 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,34,321 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ನಿಂದ ಸತ್ತವರ ಸಂಖ್ಯೆ 192 ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News