ಸೀಡಿ ಪ್ರಕರಣ: ತನಿಖಾ ವರದಿ ನೀಡಲು ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ

Update: 2021-04-07 16:50 GMT

ಬೆಂಗಳೂರು, ಎ.7: ಸೀಡಿ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಸಿಟ್) ತನಿಖೆ ಚುರುಕುಗೊಳಿಸಿದ್ದು, ಈವರೆಗಿನ ತನಿಖಾ ಪ್ರಗತಿ ವರದಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ.

ಈ ಸಂಬಂಧ ಸಿಟ್ ಮುಖ್ಯಸ್ಥ ಸೌಮೇಂದ್ರ ಮುಖರ್ಜಿ ಅವರಿಗೆ ಸೂಚಿಸಿದ್ದು, ಗುರುವಾರ ವರದಿಯು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಕೈ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿ ಸಿಟ್ 30ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದ್ದು, ಸಿಆರ್‌ಪಿಸಿ 161ರಡಿ ಸಂತ್ರಸ್ತೆ ಯುವತಿ ಹೇಳಿಕೆ ದಾಖಲಿಸಿಕೊಂಡಿದೆ. ರಮೇಶ್ ಜಾರಕಿಹೊಳಿ ಅವರನ್ನು ಮೂರು ಬಾರಿ ವಿಚಾರಣೆ ನಡೆಸಿದ್ದು, ಶೇ. 60ರಷ್ಟು ತನಿಖೆ ಮುಕ್ತಾಯಗೊಂಡಿದೆ. ಹಾಗಾಗಿ, ವರದಿ ಕೇಳಿರುವುದಾಗಿ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News