ತ್ರಿಪುರ: ಮುಖ್ಯಮಂತ್ರಿಗೆ ಕೊರೋನ ಸೋಂಕು

Update: 2021-04-07 18:09 GMT

ಅಗರ್ತಲ, ಎ.7: ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್‌ಕುಮಾರ್ ದೇಬ್‌ಗೆ ಕೊರೋನ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ.

ಕೊರೋನ ಸೋಂಕು ಪರೀಕ್ಷೆಯಲ್ಲಿ ಪೊಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ. ಪ್ರತಿಯೊಬ್ಬರೂ ಕೊರೋನ ಸೋಂಕಿನ ವಿರುದ್ಧದ ನಿಯಮಗಳನ್ನು ಪಾಲಿಸಿ ಸುರಕ್ಷಿತರಾಗಿರಬೇಕು ಎಂದು ದೇಬ್ ಫೇಸ್‌ಬುಕ್‌ನಲ್ಲಿ ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.

 ಬುಧವಾರ ನಡೆಸಿದ ಆ್ಯಂಟಿಜೆನ್ ಟೆಸ್ಟ್‌ನ ಪರೀಕ್ಷೆಯಲ್ಲಿ ಪೊಸಿಟಿವ್ ವರದಿ ಬಂದಿದೆ. ಬಳಿಕ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಸ್ಯಾಂಪಲ್ ಕಳುಹಿಸಿದ್ದು ಅದರ ವರದಿ ಶೀಘ್ರದಲ್ಲೇ ಬರಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯಮಂತ್ರಿಗಳು ಮನೆಯಲ್ಲೇ ಕ್ವಾರಂಟೈನ್ ಆಗಲಿದ್ದಾರೆ ಎಂದು ಪಶ್ಚಿಮ ತ್ರಿಪುರಾ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ ಸಂಗೀತಾ ಚಕ್ರವರ್ತಿ ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ದೇಬ್ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿ(ಎಡಿಸಿ)ಗೆ ನಡೆಯಲಿರುವ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News