ಸಾರಿಗೆ ಇಲಾಖೆ ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ : ಸಿಎಂ ಯಡಿಯೂರಪ್ಪ

Update: 2021-04-08 05:34 GMT

ಬೆಳಗಾವಿ: ಸಾರಿಗೆ ಇಲಾಖೆ ನೌಕರರ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಹಾಗಾಗಿ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಇವತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ. ಅಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಂಡು ಮುಂದೆ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಪರಾಮರ್ಶೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News