×
Ad

ಪಿ. ಉಪೇಂದ್ರ ಶೆಣೈ

Update: 2021-04-08 17:21 IST

ಮಂಗಳೂರು, ಎ.8: ಪಡುಬಿದ್ರೆ ಕೆಳಗಿನ ಪೇಟೆ ನಿವಾಸಿ, ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಉದ್ಯೋಗಿ ಪಿ. ಉಪೇಂದ್ರ ಶೆಣೈ (79) ಇವರು ಅಲ್ಪಕಾಲದ ಅಸೌಖ್ಯದಿಂದಾಗಿ ಗುರುವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಅವರು ಹದಿನೈದು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ವಯರ್‍ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸಿ, ತದನಂತರ ಸಿಂಡಿಕೇಟ್‍ ಬ್ಯಾಂಕ್‍ನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.  ಇವರು ಪಡುಬಿದ್ರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಕ್ರಿಯ ಕಾರ್ಯಕರ್ತರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News