×
Ad

ಉಡುಪಿ: ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತಿನ ಕುರಿತು ಸಮಗ್ರ ತನಿಖೆಗೆ ಸಿಎಫ್‌ಐ ಆಗ್ರಹ

Update: 2021-04-08 20:17 IST

ಉಡುಪಿ, ಎ.8: ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಂಜುಳ ಅವರ ಅಮಾ ನತು ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ.

ಅಮಾನತಿನ ಕುರಿತು ಪ್ರತಿಕ್ರಿಯಿಸಿರುವ ಮಂಜುಳಾ, ಇದೊಂದು ತನ್ನ ವಿರುದ್ಧ ದ್ವೇಷದಿಂದ ಮಾಡಿರುವ ಪಿತೂರಿ ಎಂದು ಆರೋಪಿಸಿದ್ದಾರೆ. ಅಲ್ಲದೆ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿ ದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಂತಹ ಇಲಾಖೆ ಗಳಲ್ಲಿ ಇಂತಹ ಆರೋಪಗಳು ಕೇಳಿ ಬಂದರೆ ಜನರಿಗೆ ಆತಂಕ ಉಂಟಾಗುತ್ತದೆ. ಶಿಕ್ಷಣದ ಕುರಿತ ಬೇಜವಾಬ್ದಾರಿತನವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸಿಎಫ್‌ಐ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಹಲವಾರು ಆಯಾಮಗಳಿಂದ ತನಿಖೆ ನಡೆಸಿ ಎಲ್ಲಾ ಸತ್ಯಾಸತ್ಯೆಗಳನ್ನು ಬಯಲು ಮಾಡಬೇಕು ಹಾಗೂ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು. ಅಮಾಯಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News