ಎ.10: ಸ್ಥಳೀಯಾಡಳಿತ ಸಂಸ್ಥೆಗಳ ಬ್ಯಾರಿ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನ
ಮಂಗಳೂರು, ಎ.8: ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ದ.ಕ.ಜಿಲ್ಲೆಯ ಸ್ಥಳೀಯ ಚುನಾಯಿತ ಸಂಸ್ಥೆಗಳ ಬ್ಯಾರಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ವಿವಿಧ ಕ್ಷೇತ್ರದ ಬ್ಯಾರಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಎ.10ರಂದು ಬೆಳಗ್ಗೆ 10ಕ್ಕೆ ನಗರದ ಬಾವುಟಗುಡ್ಡೆಯ ಹೊಟೇಲ್ ರೋಯಲ್ ಬ್ರಿಗೇಡ್ (ನಲಪಾಡ್)ನಲ್ಲಿ ನಡೆಯಲಿದೆ.
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಮುಹಮ್ಮದ್ ನಝೀರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಯುಟಿ ಖಾದರ್, ಮಾಜಿ ಶಾಸಕ ರಮಾನಾಥ ರೈ, ಜೆಡಿಎಸ್ ಜಿಲ್ಲಾಧ್ಯಕ್ಷ ವಿಟ್ಲ ಮುಹಮ್ಮದ್ ಕುಂಞಿ, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಡಾ. ರೀಟಾ ನೊರೊನ್ಹಾ, ರೇಶ್ಮಾ ಇಬ್ರಾಹೀಂ, ಡಾ.ಕೆ.ಎಂ.ಮುನೀರ್ ಬಾವ, ಬಿಎಂ ಮುಮ್ತಾಝ್ ಅಲಿ, ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಉಸ್ಮಾನ್ ಅಬ್ದುಲ್ ಖಾದರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಕೆ.ಎಸ್.ಅಬೂಬಕರ್ ಪಲ್ಲಮಜಲು ತಿಳಿಸಿದ್ದಾರೆ.