ಎ.9: ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಪ್ರವಾಸ

Update: 2021-04-08 16:49 GMT

ಮಂಗಳೂರು, ಎ.8: ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಿ.ಎನ್. ಎ.9 ಮತ್ತು 10ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಎ.9ರಂದು ಸಂಜೆ 4:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಂಜೆ 5:30ಕ್ಕೆ ಕಡಬ ತಾಲೂಕಿನ ಖಾಸಗಿ ಕಾರ್ಯಕ್ರಮ (ಧರ್ಮನೇಮೋತ್ಸವ)ದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9:15ಕ್ಕೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಎ.10 ರಂದು ಬೆಳಗ್ಗೆ 8:25ಕ್ಕೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News