ಬಾವಿಗೆ ಹಾರಿ ಆತ್ಮಹತ್ಯೆ
Update: 2021-04-08 22:35 IST
ಶಿರ್ವ, ಎ.8: ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಪು ಗ್ರಾಮದ ಪಣಿಯೂರು ಬಡಗರಗುತ್ತು ನಿವಾಸಿ ನಿರಂಜನ್ ಶೆಟ್ಟಿ(59) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.8ರಂದು ಬೆಳಗಿನ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಪು ಸಿಎ ಬ್ಯಾಂಕ್ ಪಣಿಯೂರು ಶಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡಿಕೊಂಡಿದ್ದ ಇವರು, ಅನಾರೋಗ್ಯದ ನಿಮಿತ್ತ ವಾರದ ಹಿಂದೆ ಕೆಲಸಕ್ಕೆ ರಾಜೀನಾಮೆ ನೀಡಿದ್ದರು.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.