ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಶಫಿ ಮುನ್ನಾ ಆಯ್ಕೆ

Update: 2021-04-08 17:19 GMT
ಶಫಿ ಮುನ್ನಾ - ಇಸ್ಮಾಯಿಲ್

ಕುಮಟಾ : ಇಲ್ಲಿನ ಐಡಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಚುನಾವಣೆಯಲ್ಲಿ ಕುಮಟಾ ತಾಲೂಕು ಅಧ್ಯಕ್ಷರಾಗಿ ಬೆಟ್ಕುಲಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶಫಿ ಮುನ್ನಾ ಸರ್ವಾನುಮತ ದೊಂದಿಗೆ ಆಯ್ಕೆಯಾಗಿದ್ದಾರೆ ಎಂದು ಉ.ಕ. ಜಿಲ್ಲಾಧ್ಯಕ್ಷ ಅಲಿ ಮನಿಗಾರ್ ತಿಳಿಸಿದ್ದಾರೆ.

ಜಿಲ್ಲಾ ಕಾರ್ಯದರ್ಶಿಯಾಗಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಬೆಟ್ಕುಳಿ ಇದರ ಸಹ ಶಿಕ್ಷಕ ಇಸ್ಮಾಯಿಲ ಮುಜಾವರ್ ನೇಮಕಗೊಂಡಿದ್ದಾರೆ. 

ಅಧಿಕಾರ ವಹಿಸಿ ಮಾತನಾಡಿದ ಶಫಿ ಮುನ್ನಾ ಕುಮಟಾ ತಾಲೂಕಿನಲ್ಲಿ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ, ರಾಜ್ಯ ಕಾರ್ಯದರ್ಶಿ ಯಾಸೀನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News