ಕೊರೋನ ಸೋಂಕು ಹೆಚ್ಚಳ: ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸ್ಥಗಿತಗೊಳಿಸಿ ಸರಕಾರ ಆದೇಶ

Update: 2021-04-08 17:21 GMT

ಬೆಂಗಳೂರು, ಎ.8: ರಾಜ್ಯದಲ್ಲಿ ಪ್ರತಿ ದಿನ ಕೊರೋನ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯವನ್ನು ಸ್ಥಗಿತಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ರಾಜ್ಯದ ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೆ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಯೋಜನೆಯನ್ನು ಜಾರಿಗೊಳಿಸಿ ಪ್ರತಿ ತಿಂಗಳ ಮೂರನೆ ಶನಿವಾರ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯವನ್ನು ಸರಕಾರ ಆರಂಭಿಸಿತ್ತು.

ಈಗ ರಾಜ್ಯದಲ್ಲಿ ಕೊರೋನ ಸೋಂಕು ಹೆಚ್ಚಾಗಿರುವುದರಿಂದ ಜನ ಗುಂಪುಗೂಡುವುದನ್ನು ತಪ್ಪಿಸಲು 8 ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯವನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೊರೋನ ಸೋಂಕು ಹೆಚ್ಚುತ್ತಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮೈಸೂರು, ಹಾಸನ, ಬೀದರ್, ದಕ್ಷಿಣ ಕನ್ನಡ, ಮಂಡ್ಯ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉಳಿದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಮೂರನೆ ಶನಿವಾರ ಯಥಾಪ್ರಕಾರ ಮುಂದುವರಿಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News