×
Ad

ಧಾರ್ಮಿಕ ಕ್ಷೇತ್ರಗಳ ಮಲಿನ; ನೈಜ ಆರೊಪಿಗಳ ಬಂಧನ ನಡೆಯಲಿ : ಡಿವೈಎಫ್ಐ

Update: 2021-04-08 22:58 IST

ಮಂಗಳೂರು, ಎ.8: ಕಳೆದ ನಾಲ್ಕು ತಿಂಗಳಿನಿಂದ ಧಾರ್ಮಿಕ ಕ್ಷೇತ್ರಗಳ ಹುಂಡಿಗೆ ಆಕ್ಷೇಪಾರ್ಹ ವಸ್ತುಗಳನ್ನು ಹಾಕುವುದು, ಕಲ್ಲು ತೂರಾಟ ನಡೆಸುವುದು ಸೇರಿದಂತೆ ಜನರ ಭಾವನೆಯನ್ನು ಘಾಸಿಗೊಳಿಸಿ ಮತೀಯ ಉದ್ವಿಗ್ನತೆ ಮೂಡಿಸುವ ಕೆಲಸ ಸತತವಾಗಿ ನಡೆಯುತ್ತಿದೆ. ಆದರೆ ಈ ಪ್ರಕರಣಗಳನ್ನು ಬೇಧಿಸಲು ಪೊಲೀಸ್ ಇಲಾಖೆ ವಿಫಲಗೊಂಡಿದೆ. ಪೊಲೀಸ್ ತನಿಖೆಯ ವೈಫಲ್ಯವನ್ನೆ ಬಳಸಿಕೊಂಡು ಕೆಲವು ಶಕ್ತಿಗಳು ಜನರನ್ನು ತಪ್ಪುದಾರಿಗೆಳೆಯುವ ಪ್ರಯತ್ನ ನಡೆಸುತ್ತಿದೆ. ಆ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ದಕ್ಷ ಅಧಿಕಾರಿಗಳ ಮೂಲಕ ತನಿಖೆ ನಡೆಸಿ ಪ್ರಕರಣದ ಹಿಂದಿರುವ ಜಾಲವನ್ನು ಬೇಧಿಸಿ, ಪ್ರಕರಣದಲ್ಲಿ ಭಾಗಿಯಾಗಿರುವ ಕ್ರಿಮಿನಲ್ಗಳನ್ನು ಬಂಧಿಸಬೇಕು ಎಂದು ಡಿವೈಎಫ್‌ಐ ರಾಜ್ಯ ಸಮಿತಿಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಮತೀಯ ಹಿಂಸಾಚಾರಕ್ಕೆ ಪ್ರಚೋದಿಸುವವರನ್ನು ಹದ್ದು ಬಸ್ತಿನಲ್ಲಿಡಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News