ಆರ್‌ಟಿಇ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ
Update: 2021-04-08 23:40 IST
ಬೆಂಗಳೂರು, ಎ.8: ಆರ್‌ಟಿಇಯಡಿ ಅರ್ಜಿ ಸಲ್ಲಿಸಲು ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಎ.20ರವರೆಗೆ ವಿಸ್ತರಿಸಲಾಗಿದೆ.
ಆರ್‌ಟಿಇ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎ.8ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ವಿದ್ಯಾರ್ಥಿ, ಪೋಷಕರ ಮನವಿಯ ಮೇರೆಗೆ ಹಾಗೂ ಹೆಚ್ಚಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ದಿನಾಂಕವನ್ನು ಎ.20ರವರೆಗೆ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.