ಬಿಜೆಪಿಯ ಆಮಿಷ ಭೀತಿ: ಜೈಪುರದ ರೆಸಾರ್ಟ್‍ಗೆ ತೆರಳಿದ ಅಸ್ಸಾಂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಅಭ್ಯರ್ಥಿಗಳು
Update: 2021-04-09 15:47 IST
ಹೊಸದಿಲ್ಲಿ: ಮುಂದಿನ ತಿಂಗಳು ಪ್ರಕಟವಾಗಲಿರುವ ಚುನಾವಣಾ ಫಲಿತಾಂಶಕ್ಕಿಂತ ಮುಂಚಿತವಾಗಿ ಬಿಜೆಪಿ ತಮ್ಮ ಪಕ್ಷದವರಿಗೆ ಆಮಿಷವೊಡ್ಡಲು ಪ್ರಯತ್ನಿಸಬಹುದು ಎಂಬ ಭೀತಿಯ ಮಧ್ಯೆ ಅಸ್ಸಾಂನಲ್ಲಿನ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ 22 ಅಭ್ಯರ್ಥಿಗಳು ಜೈಪುರಕ್ಕೆ ಪ್ರಯಾಣಿಸಿದ್ದು, ಸುರಕ್ಷತೆಗಾಗಿ ಹೊಟೇಲ್ ನಲ್ಲಿ ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಭ್ಯರ್ಥಿಗಳಲ್ಲಿ ಮೌಲಾನಾ ಬದ್ರುದ್ದೀನ್ ಅಜ್ಮಲ್ ನೇತೃತ್ವದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಎಐಯುಡಿಎಫ್)ಬೋಡೊಲ್ಯಾಂಡ್ ಪೀಪಲ್ಸ್ ಫ್ರಂಟ್(ಬಿಎಪಿಎಫ್)ಹಾಗೂ ಎಡಪಂಥೀಯರು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಜುಲೈನಲ್ಲಿ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕೂಡಿಹಾಕಿದ ರಾಜಸ್ಥಾನದ ರಾಜಧಾನಿಯ ಹೊಟೇಲ್ ನಲ್ಲಿ 22 ಅಭ್ಯರ್ಥಿಗಳು ತಂಗಲಿದ್ದಾರೆ.