ಕೋವಿಡ್-19 ಪ್ರಕರಣ ಹೆಚ್ಚಳ: ದಿಲ್ಲಿಯ ಎಲ್ಲ ಶಾಲಾ-ಕಾಲೇಜುಗಳು ಬಂದ್
Update: 2021-04-09 17:36 IST
ಹೊಸದಿಲ್ಲಿ: ದೇಶದ ಇತರ ಭಾಗಗಳ ಜೊತೆಗೆ ರಾಷ್ಟ್ರ ರಾಜಧಾನಿಯಲ್ಲೂ ಅಪಾರ ಪ್ರಮಾಣದಲ್ಲಿ ಕೊರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ.
ಕೋವಿಡ್-19 ದರ ಏರಿಕೆಯ ಮಧ್ಯೆ ದಿಲ್ಲಿ ಸೇರಿದಂತೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾತ್ರಿ ಕರ್ಫ್ಯೂಗಳಂತಹ ಹೊಸ ನಿರ್ಬಂಧಗಳನ್ನು ಘೋಷಿಸಿವೆ,
ದಿಲ್ಲಿಯಲ್ಲಿ ಈಗಾಗಲೇ ಹಲವು ತರಗತಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಬೋರ್ಡ್ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದರು.