ಉಡುಪಿ: ಶುಕ್ರವಾರ ಜಿಲ್ಲೆಯಲ್ಲಿ 46 ಮಂದಿಗೆ ಕೊರೋನ ಪಾಸಿಟಿವ್

Update: 2021-04-09 13:36 GMT

ಉಡುಪಿ, ಎ.9: ಜಿಲ್ಲೆಯಲ್ಲಿ ಶುಕ್ರವಾರ 46 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ದಿನದಲ್ಲಿ 57 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಕೋವಿಡ್‌ಗೆ ಸಕ್ರಿಯರಾಗಿರುವವರ ಸಂಖ್ಯೆ 390 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 46 ಮಂದಿಯಲ್ಲಿ 28 ಮಂದಿ ಪುರುಷರು ಹಾಗೂ 18 ಮಂದಿ ಮಹಿಳೆಯರು. ಇವರಲ್ಲಿ 25 ಮಂದಿ ಉಡುಪಿ ತಾಲೂಕಿನವರಾದರೆ, 17 ಮಂದಿ ಕುಂದಾಪುರ ತಾಲೂಕು ಹಾಗೂ ನಾಲ್ವರು ಕಾರ್ಕಳ ತಾಲೂಕಿನವರು. ಇವರಲ್ಲಿ 40 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಗುರುವಾರ 57 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 25,247ಕ್ಕೇರಿದೆ. ಅಲ್ಲದೇ ಈ ದಿನ ಜಿಲ್ಲೆಯಲ್ಲಿ ಒಟ್ಟು 2819 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 46 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 25,829 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,39,708 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ನಿಂದ ಒಟ್ಟು 192 ಆಗಿದೆ.

ಜಿಲ್ಲೆಯಲ್ಲಿ 8740 ಮಂದಿಗೆ ಕೊರೋನ ಲಸಿಕೆ
ಕೊರೋನ ವಿರುದ್ಧದ ಲಸಿಕೆಯನ್ನು ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 8740 ಮಂದಿ ಸ್ವೀಕರಿಸಿದರು. ಇವರಲ್ಲಿ 7938 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 802 ಮಂದಿಗೆ ಎರಡನೇ ಡೋಸ್ ನೀಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 8626 ಮಂದಿ ಲಸಿಕೆಯನ್ನು ಸ್ವೀಕರಿ ಸಿದ್ದು, ಇವರಲ್ಲಿ 7927 ಮಂದಿ ಮೊದಲ ಡೋಸ್‌ನ್ನೂ, 699 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 60 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 54 ಮಂದಿ ಕೊರೋನ ಮುಂಚೂಣಿ ಯೋಧರು ಸಹ ಇಂದು ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದವರು ಹೇಳಿದರು.

ಜಿಲ್ಲೆಯಲ್ಲಿ ಇದುವರೆಗೆ ಲಸಿಕೆಯ ಮೊದಲ ಡೋಸ್‌ನ್ನು ಪಡೆದವರ ಸಂಖ್ಯೆ 1,31,857ಕ್ಕೇರಿದರೆ, 21,502 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News