ಚಾರ್ಮಾಡಿ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ
ಮಂಗಳೂರು, ಎ.9:ದ.ಕ.ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-73 (ಹಳೆ ರಾ.ಹೆ-234) ಮಂಗಳೂರು -ವಿಲ್ಲುಪುರಂ ರಸ್ತೆಯ ಕಿ.ಮೀ 76.00ರಿಂದ ಕಿ.ಮೀ. 86.20ರವರೆಗೆ ಚಾರ್ಮಾಡಿ ಘಾಟ್ ರಸ್ತೆಯ ಮಾರ್ಗದಲ್ಲಿ ಎ.9ರಿಂದ ಜಾರಿಗೆ ಬರುವಂತೆ ಎಲ್ಲಾ ರೀತಿಯ ಭಾರೀ ವಾಹನಗಳ (ಗುಂಪು-ಬಿ ವಾಹನಗಳ) ಸಂಚಾರವನ್ನು ನಿರ್ಬಂಧಿಸಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಈ ಮಧ್ಯೆ ಕೆಲವು ನಿಬಂಧನೆಗಳಿಗೆ ಒಳಪಟ್ಟು ದಿನದ 24 ಗಂಟೆಗಳ ಕಾಲ ಲಘು ಹಾಗೂ ಕೆಲವು ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ್ದಾರೆ.
*ಸಂಚರಿಸಬಹುದಾದ ಲಘು ವಾಹನಗಳು (ಗುಂಪು-ಎ): ಸಾರ್ವಜನಿಕರು ಸಂಚರಿಸುವ ಕೆಎಸ್ಸಾರ್ಟಿಸಿ ಕೆಂಪು ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲ್ಲರ್ಸ್, ಆ್ಯಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್‌ಸಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು.
*ನಿರ್ಬಂಧಿಸಲಾದ ಭಾರಿ ವಾಹನಗಳು (ಗುಂಪು-ಬಿ): ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವಾಹನಗಳು, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟರ್ರಲರ್, ಕೆಎಸ್ಸಾರ್ಟಿಸಿ ರಾಜಹಂಸ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳು.