ಕಾರ್ಕಳ: ಮನೆಗೆ ನುಗ್ಗಿ ನಗನಗದು ಕಳವು

Update: 2021-04-09 17:15 GMT

ಕಾರ್ಕಳ, ಎ.9: ಬೈಲೂರು ಪೆರ್ಕಾಡಿ ಎಂಬಲ್ಲಿ ಎ.7ರಂದು ರಾತ್ರಿ ವೇಳೆ ಮನೆಗೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಶೀರಿನ್ ಬಾನು ಎಂಬವರ ಮನೆಯ ಮುಂದಿನ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಬೆಡ್ರೂಮಿನ ಕಪಾಟಿನಲ್ಲಿರಿಸಿದ್ದ ಸುಮಾರು 35,000 ರೂ. ವೌಲ್ಯದ 10 ಗ್ರಾಂ ತೂಕದ ಚಿನ್ನಾಭರಣ ಹಾಗೂ 20,000ರೂ. ನಗದು ಕಳವು ಮಾಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News