ಕಾಶ್ಮೀರ: ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ 7 ಉಗ್ರರ ಹತ್ಯೆ

Update: 2021-04-09 17:33 GMT

ಶ್ರೀನಗರ, ಎ.9: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 7 ಉಗ್ರರು ಹತರಾಗಿದ್ದಾರೆ. ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಶೋಫಿಯಾನ್ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ 5 ಉಗ್ರರು ಹತರಾಗಿದ್ದಾರೆ. ಮೃತ ಉಗ್ರರು ಅಲ್-ಖಾಯಿದ ಸಂಘಟನೆಯ ಸಹಸಂಸ್ಥೆ ಎಜಿಎಚ್‌ನ ಸದಸ್ಯರು ಎಂದು ಶಂಕಿಸಲಾಗಿದೆ. ಕಾರ್ಯಾಚರಣೆಯಲ್ಲಿ ಐವರು ಉಗ್ರರು ಹತರಾಗಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.

ಇದೇ ಕಾರ್ಯಾಚರಣೆ ಸಂದರ್ಭ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಬ್ಬರು ಉಗ್ರರನ್ನು ಬೆನ್ನಟ್ಟಿ ಶುಕ್ರವಾರ ಬೆಳಿಗ್ಗೆ ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ ಎಂದವರು ಹೇಳಿದ್ದಾರೆ. ಗುರುವಾರದ ಕಾರ್ಯಾಚರಣೆಯ ಸಂದರ್ಭ ಶ್ರೀನಗರದ ಹೊರವಲಯದಲ್ಲಿರುವ ಐಷಾರಾಮಿ ಮನೆಯಲ್ಲಿ ಉಗ್ರರು ಅವಿತಿರುವ ಶಂಕೆಯಲ್ಲಿ ಭದ್ರತಾ ಪಡೆಗಳು ಮನೆಯ ಮೇಲೆ ಗುಂಡಿನ ದಾಳಿ ನಡೆಸಿದಾಗ ಮನೆಗೆ ಹಾನಿಯಾಗಿದೆ. ಆದರೆ 17 ಗಂಟೆಗಳ ಕಾರ್ಯಾಚರಣೆಯ ಬಳಿಕ ಮನೆಯಲ್ಲಿ ಯಾರೂ ಪತ್ತೆಯಾಗಿರಲಿಲ್ಲ ಎಂದು ಮೂಲಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News