ಮಂಗಳೂರು: ಅಪ್ರಾಪ್ತ ವಯಸ್ಸಿನ ಪುತ್ರಿಯ ಅತ್ಯಾಚಾರ; ಆರೋಪಿ ತಂದೆಯ ಬಂಧನ

Update: 2021-04-10 07:19 GMT

ಮಂಗಳೂರು, ಎ.10: ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಕೃತ್ಯ ಮಂಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಮಚಂದ್ರಪ್ಪ ಬಂಧಿತ ಆರೋಪಿ. ಈತ ಕಳೆದ ಐದಾರು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ  ಎಂದು ರಾಮಚಂದ್ರಪ್ಪನ ಪುತ್ರಿ ಮಹಿಳಾ ಠಾಣೆಗೆ ದೂರು ನೀಡಿದ್ದಳು.

ಮಗಳು 5ನೆ ತರಗತಿಯಲ್ಲಿರುವಾಗ ಅಂದರೆ 2015-16ರಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಅತ್ಯಾಚಾರ ಎಸಗಿದ್ದ. ಬಳಿಕವೂ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಸಂತ್ರಸ್ತೆ 10ನೇ ತರಗತಿಯಲ್ಲಿ ಓದುತ್ತಿದ್ದು, ತಂದೆಯ ಕೃತ್ಯದಿಂದ ದೈಹಿಕ ಮತ್ತು ಮಾನಸಿಕವಾಗಿ ನೊಂದಿದ್ದಳು. ಅಂತೆಯೇ ಆರೋಪಿ ತಂದೆಯ ವಿರುದ್ಧ ದೂರು ನೀಡಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News