ಬರಹ ಮತ್ತು ಸಂವಹನ ಕೌಶಲ ಕಮ್ಮಟಕ್ಕೆ ಅರ್ಜಿ ಆಹ್ವಾನ

Update: 2021-04-10 12:37 GMT

ಬೆಂಗಳೂರು, ಎ.10: ಕರ್ನಾಟಕ ಸಾಹಿತ್ಯ ಅಕಾಡಮಿ ವತಿಯಿಂದ ವಿಶೇಷ ಘಟಕ ಯೋಜನೆಯಡಿ ಜೂನ್ ತಿಂಗಳಲ್ಲಿ ಆಯೋಜಿಸಲಿರುವ ಐದು ದಿನಗಳ ಮಾಧ್ಯಮ ಪ್ರವೇಶಿಕೆ: ಬರಹ ಮತ್ತು ಸಂವಹನ ಕೌಶಲ ಕಮ್ಮಟಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ 20ರಿಂದ 50ರ ವಯೋಮಿತಿಯಲ್ಲಿರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಐದು ದಿನಗಳು ಶಿಬಿರದಲ್ಲೇ ವಾಸ್ತವ್ಯ ಮಾಡಬೇಕಾಗಿರುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಬಿರದ ಸ್ಥಳಕ್ಕೆ ಬಂದು ಹೋಗಲು ರಾಜಹಂಸ ಬಸ್ ದರ, ಸಾಮಾನ್ಯ ರೈಲ್ವೆ ದರವನ್ನು ನೀಡಲಾಗುವುದು. ಹಾಗೂ ಐದು ದಿನಗಳು ಊಟೋಪಹಾರ, ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಜೊತೆಗೆ ಅಕಾಡೆಮಿ ನಿಯಮಾನುಸಾರ ಆಯ್ಕೆಯಾಗಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಪ್ರಯಾಣಭತ್ತೆಯನ್ನು ಕಾರ್ಯಕ್ರಮ ಮುಗಿದ ನಂತರ ಬ್ಯಾಂಕ್ ಖಾತೆಗೆ ನೇರವಾಗಿ ಆರ್‍ಟಿಜಿಎಸ್ ಮೂಲಕ ಪಾವತಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‍ಸೈಟ್‍ನಿಂದ ಪಡೆದುಕೊಳ್ಳಬಹುದಾಗಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮ ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು ಎ.30 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News