ಎ.11ರಂದು ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ

Update: 2021-04-10 14:57 GMT

ಉಡುಪಿ, ಎ.10: ಅಂಬಲಪಾಡಿಯ ಜನಾರ್ದನ ಮಹಾಕಾಳಿ ದೇವಸ್ಥಾನ, ಬುಡಕಾನ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಅಭಯಹಸ್ತ ಹೆಲ್ಫ್‌ಲೈನ್ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಪರಿಣಿತ, ತಜ್ಞ ವೈದ್ಯರೀಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಜಾಗೃತಿ ಕಾರ್ಯಕ್ರಮ ಹಾಗೂ ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ರಕ್ತ ಕೇಂದ್ರದ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಎ.11ರಂದು ನಡೆಯಲಿದೆ.

ಅಂಬಲಪಾಡಿ ದೇವಸ್ಥಾನದ ವಠಾರದಲ್ಲಿ ಬೆಳಗ್ಗೆ 9:00ರಿಂದ ಅಪರಾಹ್ನ 1:00ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆಯ ಹೃದ್ರೋಗ ವಿಭಾಗ, ಸಾಮಾನ್ಯ ವೈದ್ಯಕೀಯ ವಿಭಾಗ, ಕಿವಿ ಮೂಗು ಗಂಟಲು ವಿಭಾಗ, ಚರ್ಮರೋಗ ವಿಭಾಗ, ಮೂಳೆ ಮತ್ತು ಕೀಲಿನ ವಿಭಾಗ, ನೇತ್ರ ವಿಭಾಗ, ಮಕ್ಕಳ ವಿಭಾಗ, ವಾಕ್ ಮತ್ತು ಶ್ರವಣ ವಿಭಾಗಗಳ ತಜ್ಞರು ಪಾಲ್ಗೊಳ್ಳಲಿದ್ದಾರೆ.

ಮಧುಮೇಹ ಮತ್ತು ಪಾದದ ತಪಾಸಣೆ, ಇಸಿಜಿ, ಬಿಪಿ ಮತ್ತು ಕಣ್ಣಿನ ತಪಾಸಣೆಯನ್ನು ಉಚಿತವಾಗಿ ನಡೆಸಲಾಗುವುದು. ಅಗತ್ಯವುಳ್ಳವರಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಹಾಗೂ ಇತರ ಚಿಕಿತ್ಸೆಗಳನ್ನು ಆಸ್ಪತ್ರೆಯಲ್ಲಿ ನೀಡಲಾಗುವುದು. ಈ ಶಿಬಿರದ ಪ್ರಯೋಜನ ವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.

ಶಿಬಿರಕ್ಕೆ ಆಗಮಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News