ಕಂದಕಕ್ಕೆ ಉರುಳಿ ಬಿದ್ದ ಟ್ರಕ್, 10 ಮಂದಿ ಮೃತ್ಯು, 30ಕ್ಕೂ ಅಧಿಕ ಜನರಿಗೆ ಗಾಯ

Update: 2021-04-10 15:28 GMT

ಇಟಾವ್ಹಾ:ಟ್ರಕ್ ವೊಂದು ಕಣಿವೆಯೊಂದಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 30ಕ್ಕೂ ಅಧಿಕ ಜನರಿಗೆ ಗಾಯವಾಗಿರುವ ಭೀಕರ ಘಟನೆ ಉತ್ತರಪ್ರದೇಶದ ಇಟಾವಾದಲ್ಲಿ ಶನಿವಾರ ನಡೆದಿದೆ.

ಡಿಸಿಎಂ ಟ್ರಕ್ ರೋಡ್ ನಿಂದ ಸ್ಕಿಡ್ ಆಗಿ ಇಟಾವಾ ಜಿಲ್ಲೆಯ ಕಸೌವಾ ಪ್ರದೇಶದ ಆಳವಾದ ಕಣಿವೆಗೆ ಮಗುಚಿ ಬಿದ್ದಿದೆ.

ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಾರಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ನಲ್ಲಿ 40ರಿಂದ 50 ಜನರು ಪ್ರಯಾಣಿಸುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಕುಮಾರ್ ಪ್ರಸಾದ್ ಪಿಟಿಐಗೆ ತಿಳಿಸಿದ್ದಾರೆ.

ಘಟನೆಯಲ್ಲಿ ಸಾವಿನ ಸಂಖ್ಯೆ 10ಕ್ಕೇರಿದ್ದು, 30-35 ಮಂದಿ ಗಾಯಗೊಂಡಿದ್ದಾರೆ. ಅವರು ಇಟಾವಾ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News