ಕೋವಿಡ್ ಶಿಷ್ಟಾಚಾರ ಪಾಲಿಸದವರ ವಿರುದ್ಧ ಕ್ರಮಕ್ಕೆ ಆಗ್ರಹ

Update: 2021-04-10 16:23 GMT

ಮಂಗಳೂರು, ಎ.10: ಸಂಸದ ನಳಿನ್ ಕುಮಾರ್ ಕಟೀಲ್ ರ ತರವಾಡಿನ ಧರ್ಮನೇಮದಲ್ಲಿ ಪಾಲ್ಗೊಂಡ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನ ಪಾಸಿಟಿವ್ ಆದ ಕಾರಣ ಅವರ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಕ್ವಾರಂಟೈನ್‌ಗೊಳಪಡಿಸಬೇಕು. ಶಿಷ್ಟಾಚಾರ ಉಲ್ಲಂಘಿಸಿದ ಎಲ್ಲರ ಮೇಲೂ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಧರ್ಮನೇಮದಲ್ಲಿ ಪಾಲ್ಗೊಂಡ ಸಚಿವ ಕೋಟಾರಿಗೆ ಕೊರೋನ ಪಾಸಿಟಿವ್ ಆದ ಕಾರಣ ಎಲ್ಲರನ್ನೂ ಕೋವಿಡ್ ಪರೀಕ್ಷೆ ಮಾಡಿಸಬೇಕು. ಸಚಿವ ಈಶ್ವರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ವೇದವ್ಯಾಸ ಕಾಮತ್ ಸಹಿತ ಎಲ್ಲರೂ ಸುರಕ್ಷಿತ ಅಂತರ ಕಾಪಾಡಿಲ್ಲ. ಎಲ್ಲರೂ ಹೆಗಲಿಗೆ ಹೆಗಲು ತಾಗಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಿಯಮ ಉಲ್ಲಂಘಿಸಿದ್ದಾರೆ. ಜಿಲ್ಲಾಧಿಕಾರಿಯೂ ಕೂಡ ಉಸ್ತುವಾರಿ ಸಚಿವರ ಜೊತೆಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಾಗಾಗಿ ಎಲ್ಲರೂ ಕ್ವಾರಂಟೈನ್‌ಗೊಳಪಡೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News