ದ.ಕ.ಜಿಲ್ಲೆಯಲ್ಲಿ ಶನಿವಾರ 137 ಮಂದಿಗೆ ಕೊರೋನ ಪಾಸಿಟಿವ್

Update: 2021-04-10 16:29 GMT

ಮಂಗಳೂರು, ಎ.10: ದ.ಕ.ಜಿಲ್ಲೆಯಲ್ಲಿ ಶನಿವಾರ 137 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 36,652 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಶನಿವಾರ 41 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 34,994 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ 6,59,029 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,23,377 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 965 ಸಕ್ರಿಯ ಪ್ರಕರಣವಿದೆ.

ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 44,408 ಪ್ರಕರಣ ದಾಖಲಿಸಿ, 46,15,730 ರೂ. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News