ಪ್ರಧಾನಿ-ಸಿಎಂ ಮಾತುಕತೆ: ಮೈಕ್ರೋ ಕಂಟೈನ್ಮೆಂಟ್ ವಲಯಕ್ಕೆ ಹೆಚ್ಚಿನ ಗಮನಹರಿಸಲು ಸಲಹೆ

Update: 2021-04-11 08:36 GMT

ಬೆಂಗಳೂರು, ಎ.11: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯಗಳತ್ತ ಹೆಚ್ಚಿನ ಗಮನ ಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಇಂದು ಬೆಳಗ್ಗೆ ಪ್ರಧಾನಿ ಜೊತೆ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಇಂದು ಮಾತನಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದ ಕ್ರಮಗಳ ಬಗ್ಗೆ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಮೈಕ್ರೋ ಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News