ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‍ಗೆ ಕೋವಿಡ್ ಪಾಸಿಟಿವ್

Update: 2021-04-11 14:20 GMT

ರಾಯಚೂರು, ಎ. 11: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರತಾಪಗೌಡ ಪಾಟೀಲ್ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶವನ್ನು ಖುದ್ದು ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರೇ ಹಾಕಿದ್ದು, `ಮತದಾರ ಬಂಧುಗಳಲ್ಲಿ ನನ್ನ ಕಳಕಳಿಯ ಮನವಿ. ನನಗೆ ಕೊರೋನ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ ಇದ್ದೇನೆ. ಯಾರೂ ಆತಂಕ ಪಡಬೇಕಾಗಿಲ್ಲ, ಶೀಘ್ರ ಗುಣಮುಖನಾಗಿ ಬರುತ್ತೇನೆ. ಎ.17ರಂದು ಮತದಾನ ಇದ್ದು ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡುತ್ತಾರೆ. ಅವರನ್ನು ನಾನೇ ಎಂದು ಪರಿಭಾವಿಸಿ ಆಶೀರ್ವದಿಸಲು ಮತ್ತು ಕಮಲದ ಗುರುತಿಗೆ ಮತ ನೀಡಲು ಕೋರುತ್ತೇನೆ. ನಿಮ್ಮ ಮತ್ತು ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲು ವಿನಂತಿಸುತ್ತೇನೆ' ಎಂದು ಪ್ರತಾಪಗೌಡ ಪಾಟೀಲ್ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News