ಉಡುಪಿ ಜಿಲ್ಲೆಯಲ್ಲಿ 92 ಮಂದಿಗೆ ಕೊರೋನ ಪಾಸಿಟಿವ್

Update: 2021-04-11 14:32 GMT

ಉಡುಪಿ : ರವಿವಾರ ಜಿಲ್ಲೆಯಲ್ಲಿ 92 ಮಂದಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 68 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಜಿಲ್ಲೆಯಲ್ಲಿ ಕೋವಿಡ್‌ಗೆ ಸಕ್ರಿಯರಾಗಿರುವವರ ಸಂಖ್ಯೆ 371 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 92 ಮಂದಿಯಲ್ಲಿ 52 ಮಂದಿ ಪುರುಷರು ಹಾಗೂ 40 ಮಂದಿ ಮಹಿಳೆಯರು. ಇವರಲ್ಲಿ 38 ಮಂದಿ ಉಡುಪಿ ತಾಲೂಕಿ ನವರಾದರೆ 44 ಮಂದಿ ಕುಂದಾಪುರ ತಾಲೂಕಿನವರು. ಉಳಿದ ಹತ್ತು ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 18 ಮಂದಿಯನ್ನು ಆಸ್ಪತ್ರೆಗೆ ಸೇರಿಸಿದ್ದರೆ, ಉಳಿದ 74 ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದಾರೆ ಎಂದು ಡಾ.ಸೂಡ ತಿಳಿಸಿದ್ದಾರೆ.

ಕೊಲ್ಲೂರಿನಲ್ಲಿ 30 ಪಾಸಿಟಿವ್: ಇಂದು ಕೊಲ್ಲೂರು ಪದವಿ ಪೂರ್ವ ಕಾಲೇಜು ಹಾಸ್ಟೆಲ್‌ನ 30 ಮಂದಿ ಮಕ್ಕಳು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ನಾಲ್ಕು ದಿನಗಳ ಹಿಂದೆ ಇಲ್ಲಿನ ಒಬ್ಬ ವಿದ್ಯಾರ್ಥಿಯಲ್ಲಿ ಪಾಸಿಟಿವ್ ಕಂಡುಬಂದಿದ್ದು, ನಿನ್ನೆ ಇಲ್ಲಿನ 29 ಮಂದಿಯಲ್ಲಿ ಸೋಂಕು ಕಂಡುಬಂದಿತ್ತು. ಇದರಿಂದ ಎಲ್ಲರ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷಿಸಿಸಿದಾಗ ಒಟ್ಟು 30 ವುಂದಿಯಲ್ಲಿ ಸೋಂಕು ಕಂಡುಬಂದಿತ್ತು.

ಈ ಮೂಲಕ ಈ ಹಾಸ್ಟೆಲ್‌ನಲ್ಲಿ ಒಟ್ಟು 60 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಈ ಹಾಸ್ಟೆಲ್‌ನ ಎಲ್ಲಾ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸ ಲಾಗಿದ್ದು, ಸೋಂಕಿತರನ್ನು ಐಸೋಲೇಷನ್‌ನಲ್ಲಿರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಶನಿವಾರ 68 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 25,409 ಕ್ಕೇರಿದೆ. ಶನಿವಾರ ಜಿಲ್ಲೆಯ 3095 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿ ಕೊಂಡಿದ್ದಾರೆ. ಇಂದಿನ 92 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 25,972 ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,45,125 ಮಂದಿ ಕೋವಿಡ್ ಪರೀಕ್ಷೆಗೊಳಗಾ ಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ನಿಂದ ಸತ್ತವರ ಸಂಖ್ಯೆ 192 ಆಗಿದೆ.

2455 ಮಂದಿಗೆ ಲಸಿಕೆ: ರವಿವಾರ ಜಿಲ್ಲೆಯಲ್ಲಿ ಒಟ್ಟು 2455 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಇವರಲ್ಲಿ 2308 ಮಂದಿ ಮೊದಲ ಡೋಸ್‌ನ್ನೂ 147 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಇವರಲ್ಲಿ ಕೋವಿಡ್ ಮುಂಚೂಣಿ ಕಾರ್ಯಕರ್ತರು 2427 ಮಂದಿ ಲಸಿಕೆ ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News