ಜನತೆ ಸಹಕರಿಸದಿದ್ದರೆ ಲಾಕ್‍ಡೌನ್ ಅನಿವಾರ್ಯ: ಸಿಎಂ ಯಡಿಯೂರಪ್ಪ

Update: 2021-04-12 11:23 GMT

ಬೀದರ್, ಎ. 12: ಕೊರೋನ ಎರಡನೆ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದ ಆಯ್ದ ನಗರಗಳಲ್ಲಿ ನೈಟ್ ಕರ್ಫ್ಯೂ ಹೇರಿದ್ದು, ಜನರು ಸಹಕರಿಸದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.

ಸೋಮವಾರ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರಕ್ಕೆ ಲಾಕ್‍ಡೌನ್ ಮಾಡುವ ಉದ್ದೇಶವಿಲ್ಲ. ಆದರೂ, ಪರಿಸ್ಥಿತಿ ಕೈಮೀರುವ ಹಂತಕ್ಕೆ ಹೋದರೆ ಸರ್ವಪಕ್ಷ ಸಭೆ ಕರೆದು ಲಾಕ್‍ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಲಾಕ್‍ಡೌನ್ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ. ಲಾಕ್‍ಡೌನ್‍ನಿಂದ ತೊಂದರೆ ಬಗ್ಗೆ ಸರಕಾರಕ್ಕೂ ಗೊತ್ತಿದೆ. ಆದರೆ, ಪರಿಸ್ಥಿತಿ ಕೈಮೀರುತ್ತಿದೆ. ಈ ಹಿನ್ನೆಲೆಯಲ್ಲಿ, ವಿಪಕ್ಷದವರು ಯಾವುದೇ ಸಲಹೆ ನೀಡಿದರೂ ಸ್ವೀಕರಿಸುತ್ತೇವೆ. ಜನರು ಸರಕಾರದೊಂದಿಗೆ ಸಹಕಾರ ನೀಡುವ ಮೂಲಕ ಕೊರೋನ ಸೋಂಕು ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಯಡಿಯೂರಪ್ಪ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News